ಕುಟ್ರುಪಾಡಿ: ಹೃದಯಾಘಾತದಿಂದ ನಂದಗುರಿ ಲೋಕೇಶ್ ರೈ ನಿಧನ

0

ಕಡಬ: ಕುಟ್ರುಪಾಡಿ ಗ್ರಾಮದ ನಂದಗುರಿ ನಿವಾಸಿ ಲೋಕೇಶ್ ರೈ (54) ಅವರು ಎ. 29 ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಮಧ್ಯಾಹ್ನದ ವೇಳೆ ಕುಟ್ರುಪಾಡಿಯ ಕೇಪುವಿನಲ್ಲಿರುವ ತನ್ನ ಸಹೋದರನ ಮನೆಗೆ ಕಾರ್ಯನಿಮಿತ್ತ ತೆರಳಿದ್ದರು. ಅಲ್ಲಿ ಅಸ್ವಸ್ಥಗೊಂಡು ಕುಸಿದುಬಿದ್ದ ಅವರನ್ನು ಸ್ಥಳೀಯರ ನೆರವಿನಿಂದ ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು. ಆರಂಭದಲ್ಲಿ ಮುಂಬೈಯಲ್ಲಿ ಉದ್ಯೋಗದಲ್ಲಿದ್ದ ಅವರು ಕಳೆದ ಹಲವು ವರ್ಷಗಳ ಹಿಂದೆ ಊರಿಗೆ ಬಂದು ಕಡಬ ಪರಿಸರದಲ್ಲಿ ಭೂ ವ್ಯವಹಾರಗಳ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here