ಕೊಯಿಲದಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯಿತಿ ಸದಸ್ಯರೊಂದಿಗೆ ಸಮಾಲೋಚನಾ ಸಭೆ

0

  • ಗ್ರಾಮೀಣ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು-ಮಂಜುನಾಥ ಭಂಡಾರಿ

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಾದವರು ಮತ್ತು ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿದ್ದ ಕಾರ್‍ಯಕರ್ತರು ಪಂಚಾಯತ್ ರಾಜ್ ಸಂಘಟನೆಯನ್ನು ಕಟ್ಟಬೇಕು ಆ ಮೂಲಕ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡು ಗ್ರಾಮೀಣ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಎ. 29 ರಂದು ಕೊಲದಲ್ಲಿ ಕುಟ್ರುಪ್ಪಾಡಿ, ಬಲ್ಯ, ಕುಂತೂರು, ಪೆರಾಬೆ, ಆಲಂಕಾರು, ಹಳೆನೇರೆಂಕಿ, ರಾಮಕುಂಜ, ಕೊಯಿಲ ಗ್ರಾಮಗಳ ಕಾಂಗ್ರೆಸ್ ಬೆಂಬಲಿತ ಪಂಚಾಯಿತಿ ಸದಸ್ಯರುಗಳು ಮತ್ತು ಅಭ್ಯರ್ಥಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿ ತಾವುಗಳು ನಿರಂತರವಾಗಿ ಜನರ ಜೊತೆ ಇರುವವವರು ಕನಿಷ್ಠ ತಿಂಗಳಿಗೆ ಒಮ್ಮೆಯಾದರೂ ಸಭೆ ಸೇರಿ ಸಂಘಟಿತರಾಗಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಮೂಲಕ ಸ್ಥಳೀಯವಾಗಿ ಇರುವ ನಾಯಕತ್ವ ಕೊರತೆಯನ್ನು ನೀಗಿಸಬೇಕು, ಆ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಪಕ್ಷ ತಮಗೆ ಅವಕಾಶಗಳನ್ನು ನೀಡಿದ್ದು, ಜನರಿಗೆ ಸೌಲಭ್ಯಗಳನ್ನು ಕೊಡಿಸುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ, ಬೆಲೆ ಏರಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶುಭಾಶ್ಚಂದ್ರ ಕೊಲ್ನಾಡು ಮಾತನಾಡಿ ಗ್ರಾಮ ಪಂಚಾಯಿತಿ ಸದಸ್ಯರು ನಾಯಕತ್ವ ತರಬೇತಿ ಶಿಬಿರ, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕೊಡುವಂತದ್ದು ಮೊದಲಾದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆ ಮೂಲಕ ಪಂಚಾಯತ್ ರಾಜ್ ಸಂಘಟನೆಯನ್ನು ಗಟ್ಟಿಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿಪಿ. ವರ್ಗೀಸ್, ಸರ್ವೋತ್ತಮ ಗೌಡ, ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕ್ಷೇವಿಯರ್, ಮಾಜಿ ಸದಸ್ಯ ಮ್ಯಾಥ್ಯು, ನೆಲ್ಯಾಡಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಶೆಟ್ಟಿ, ಕೊಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಡಿ.ಎ. ಅಬೂಬಕ್ಕರ್ ಅಭಿಪ್ರಾಯ, ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಡಬ ಬ್ಲಾಕ್ ಉಸ್ತುವಾರಿ ಕೃಷ್ಣಪ್ಪ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಪದಾಧಿಕಾರಿಗಳಾದ ಸತೀಶ್ ಕುಮಾರ್ ಕೆಡೆಂಜಿ, ರಾಯ್ ಅಬ್ರಾಹಂ, ಹೆಚ್. ಆದಂ, ಇಲ್ಯಾಸ್, ವಿಜಯಕುಮಾರ್ ರೈ, ಕಮಲಾಕ್ಷ ರೈ, ಪೊಡಿಕುಂಞ ನೀರಾಜೆ, ಹೆಚ್. ಅಬ್ದುಲ್ ರಹಿಮಾನ್, ಮಹಮ್ಮದ್ ರಫೀಕ್, ಸಿರಾಜ್ ಬಡ್ಡಮೆ, ಯತೀಶ್ ಗೌಡ, ಕೊಯಿಲ ಗ್ರಾಮ ಪಂಚಾಯಿತಿ ‌ಸದಸ್ಯ ನಝೀರ್ ಪೂರಿಂಗ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here