ಪುತ್ತೂರು: ನೃತ್ಯಾಂತರಂಗ 87ರಲ್ಲಿ ವಿದ್ವಾನ್ ದೀಪಕ್ ಕುಮಾರ್‌ರವರಿಂದ ಭರತನಾಟ್ಯ

0

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ದರ್ಬೆ ಇಲ್ಲಿನ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 87 ನೇ ಸರಣಿಯಲ್ಲಿ ಸಂಸ್ಥೆಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ರವರಿಂದ ಶಿವನ ಕುರಿತಾದ ಭರತನಾಟ್ಯ ಪ್ರಸ್ತುತಿ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಡಾ. ಸುಧಾ ಎಸ್ ರಾವ್ ಇವರು ಅಭ್ಯಾಗತರಾಗಿ ಆಗಮಿಸಿ ನೃತ್ಯಾಂತರಂಗ ಸರಣಿಯ ಸಾಂಸ್ಕೃತಿಕ ಹಾಗೂ ಸಾಮಾಜಿಕ ಪ್ರಭಾವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಿಮ್ಮೇಳದಲ್ಲಿ ನಟುವಾಂಗ ಹಾಗೂ ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಗೀತೇಶ್ ನೀಲೇಶ್ವರ ಹಾಗೂ ಕೊಳಲಿನಲ್ಲಿ ರಾಜಗೋಪಾಲನ್ ಕಾಂಞಂಗಾಡ್ ಸಹಕರಿಸಿದ್ದರು.

LEAVE A REPLY

Please enter your comment!
Please enter your name here