ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ, ಉಪ್ಪಳಿಗೆ, ಅಜ್ಜಿಕಲ್ಲು, ಅಜಲಡ್ಕ ಇವುಗಳ ಸಹಕಾರದೊಂದಿಗೆ 18 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ, ಧಾರ್ಮಿಕ ಸಭಾ ಕಾರ್ಯಕ್ರಮ ಮೆ.1 ರಂದು ಇರ್ದೆ ದೇವಸ್ಥಾನದಲ್ಲಿ ನಡೆಯಿತು.

ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಿ ನಂತರ ಮಹಾಪೂಜೆ ನಂತರ ಧಾರ್ಮಿಕ ಸಭೆ ನಡೆದು ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ. ಡಿ ವಹಿಸಿದ್ದರು ನಿವೃತ್ತ ಮುಖ್ಯ ಗುರು ಮಂಜುಳಗಿರಿ ವೆಂಕಟ್ರಮಣ ಭಟ್ ತೆಂಗಿನ ಹಿಂಗಾರ ಅರಳಿಸಿ ಉದ್ಘಾಟಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಎಸ್.ಕೆ.ಡಿ.ಅರ್.ಡಿ.ಪಿ ಯ ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಇರ್ದೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಬೆಟ್ಟಂಪಾಡಿ ವಲಯಾಧ್ಯಕ್ಷ ನವೀನ್ ಕುಮಾರ್. ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.



