ಕೆಲಂಬೀರಿ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಮುಕ್ತ ವಾಲಿಬಾಲ್ ಪಂದ್ಯಾಟ

0

ಕಾಣಿಯೂರು: ಸಮಾಜದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಪ್ರಮುಖವಾದುದು. ಸಂಘಟನೆಯ ಮೂಲಕ ಯುವಕರು ಸಮಾಜಮುಖಿಗಳಾಗಿ ತೊಡಗಿಸಿಕೊಂಡಾಗ ಗ್ರಾಮದ ಅಭಿವೃದ್ದ್ಧಿ ಆಗುವುದರೊಂದಿಗೆ ದೇಶದ ಅಭಿವೃದ್ದಿ ಆಗಲು ಸಾಧ್ಯ ಎಂದು ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಆತೂರು ಹೇಳಿದರು.

 

 

ಅವರು ಮೆ 1ರಂದು ಬರೆಪ್ಪಾಡಿ ಕೆಲಂಬೀರಿ ಯುವಶಕ್ತಿ ಫ್ರೆಂಡ್ಸ್ನ ಆಶ್ರಯದಲ್ಲಿ ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ನಡೆದ ಮುಕ್ತ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ವೃದ್ಧಿಯಾಗಲು ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯ ಆಡಳಿಯ ಸಮಿತಿ ಅಧ್ಯಕ್ಷ ಬಿ.ಎ ವಸಂತ ಪೂಜಾರಿ ಕೆಲಂಬೀರಿ ವಹಿಸಿದ್ದರು. ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ, ಬೆಳಂದೂರು ಗ್ರಾ.ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯ ಮೊಕ್ತೇಸರರಾದ ಬಾಬು ಪೂಜಾರಿ ಕೆಲಂಬೀರಿ, ಕಡಬ ತಾಲೂಕು ಯುವಜನ ಒಕ್ಕೂಟದ ಕೋಶಾಧಿಕಾರಿ ಸುಧಾಕರ ಆಚಾರ್ಯ ಕಾಣಿಯೂರು, ಕೆಲಂಬೀರಿ ಯುವಶಕ್ತಿ ಫ್ರೆಂಡ್ಸ್ ನ ಸಂಚಾಲಕ ಸಂತೋಷ್ ರೈ ಕಾರ್ಲಾಡಿ, ಯುವಶಕ್ತಿ ಫ್ರೆಂಡ್ಸ್ ನ ಅಧ್ಯಕ್ಷ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು. ಯುವಶಕ್ತಿ ಫ್ರೆಂಡ್ಸ್ ನ ಕೋಶಾಧಿಕಾರಿ ಸಚಿನ್ ಸೌತೆಮಾರು ಸ್ವಾಗತಿಸಿ, ಸಂದೇಶ್ ಸೌತೆಮಾರು ವಂದಿಸಿದರು. ಶಿಕ್ಷಕ ಗಣೇಶ್ ನಡುವಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here