KMF (ಮಂಗಳೂರು) ನೇಮಕಾತಿಯಲ್ಲಿ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳ ಆಯ್ಕೆ

0

ಪುತ್ತುರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 2021–2022 ರ ಸಾಲಿನ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ 3 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ತರಬೇತಿಯನ್ನು ಆಯೋಜಿಸಿತ್ತು. ಸಹಕಾರಿ ಕಾಯ್ದೆಯ ಮತ್ತು ನೇಮಕಾತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಆನ್ಲೈನ್ ತರಗತಿಗಳನ್ನು ನಡೆಸಿದ್ದು, ಇದರ ಪ್ರಯೋಜನವನ್ನು ಹಲವಾರು ಅಭ್ಯರ್ಥಿಗಳು ಪಡೆದುಕೊಂಡಿದ್ದರು ನೇಮಕಾತಿಯಲ್ಲಿ ಶ್ರೀ ದೇವಿ .ಎನ್ (ಕೆಮಿಸ್ಟ್ ದರ್ಜೆ-II ), ಮೇಘನಾ (ತಾಂತ್ರಿಕಾಧಿಕಾರಿ ಪರಿಸರ), ಪ್ರಫುಲ್ಲಾ ಪಿ ಎ (ವಿಸ್ತರಣಾಧಿಕಾರಿ ದರ್ಜೆ-III) ರವರು ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ. ಈ ಸಂದರ್ಭದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here