ಬಪ್ಪಳಿಗೆ ರಾಗಿಕುಮೇರಿ ಶ್ರೀ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಮಾರಿ ಪೂಜೆಗೆ ಸಿದ್ಧತೆ- ಅಶೋಕ್ ರೈ ನೇತೃತ್ವದಲ್ಲಿ ಸಮಾಲೋಚನಾ ಸಭೆ

0

ಪುತ್ತೂರು: ಮೇ 7ರಿಂದ 11ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ಬಪ್ಪಳಿಗೆ ರಾಗಿಕುಮೇರಿ ಶ್ರೀ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿ ಪೂಜೆಯ ಸಿದ್ಧತೆ ಕುರಿತು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು.

ಮೇ 7ರಂದು ಸಂಜೆ ಹಸಿರು ಹೊರೆ ಕಾಣಿಕೆ ಸಮರ್ಪಣೆ, ಉಗ್ರಾಣ ಉದ್ಘಾಟನೆ, ಶ್ರೀ ಕ್ಷೇತ್ರಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ವೈದಿಕ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ‘ಭಕ್ತಿ ರಸಮಂಜರಿ’, ಮೇ 8ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ‘ಭಕ್ತಿ ಗಾನಾಮೃತ’, ಭಜನಾ ಕಾರ್ಯಕ್ರಮ, ರಾತ್ರಿ ಸಭಾ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ‘ಗೀತಾ ಸಾಹಿತ್ಯ ಸಂಭ್ರಮ’, ಮೇ 9ರಂದು ವಾರ್ಷಿಕ ಮಾರಿಪೂಜೆ, ಮೇ 10 ಮತ್ತು 11ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಟ್ಟೋಜ ಎನ್.ಕೆ.ಜಗನ್ನೀವಾಸ ರಾವ್ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆ ನಡೆಯುತ್ತಿದೆ. ಬಪ್ಪಳಿಗೆ ರಾಗಿಕುಮೇರಿ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈಯವರು ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು

LEAVE A REPLY

Please enter your comment!
Please enter your name here