ಅರಿಯಡ್ಕ: ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ಬಯಲು ಕಸ ಮುಕ್ತ ಗ್ರಾಮ ಅಭಿಯಾನ

0

 

ಪುತ್ತೂರು: ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್(ಗ್ರಾ) ವತಿಯಿಂದ ಅರಿಯಡ್ಕ ಗ್ರಾಮ ಪಂಚಾಯತ್ ಮತ್ತು ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ನಮ್ಮ ಗ್ರಾಮ ಸ್ವಚ್ಛ ಗ್ರಾಮ, ಕಸ ಮುಕ್ತ ಗ್ರಾಮ ನಮ್ಮ ಸಂಕಲ್ಪದಂತೆ ಬಯಲು ಕಸ ಮುಕ್ತ ಗ್ರಾಮ ಆಭಿಯಾನ ೨೦೨೨ ಮಾಡ್ನೂರು ಗ್ರಾಮದ ಕಾವು ಸಮುದಾಯ ಭವನದ ವಠಾರದಲ್ಲಿ ಇತ್ತೀಚೆಗೆ ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯರವರು ಚಾಲನೆ ನೀಡಿದರು. ಗ್ರಾ.ಪಂ ಸದಸ್ಯರಾದ ಲೋಕೇಶ್ ಚಾಕೋಟೆ, ಅಬ್ದುಲ್ ರೆಹಮಾನ್ ಮತ್ತು ಹೇಮಾವತಿ, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಪದ್ಮಕುಮಾರಿ, ಕಾರ್ಯದರ್ಶಿ ಶಿವರಾಮ ಮೂಲ್ಯ, ಸಮುದಾಯ ಆರೋಗ್ಯ ಅಧಿಕಾರಿ ಅಶ್ವಿನಿ ,ಮಾಡ್ನೂರು ಗ್ರಾಮ ಹಾಗೂ ಕಿರಿಯ ಆರೋಗ್ಯ ಸಹಾಯಕಿ ನವ್ಯ ಮಾಡ್ನೂರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಅಭಿಯಾನದಲ್ಲಿ ಸಂತ ಫಿಲೋಮಿನಾ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರೀಕಾಂತ ಟಿ.ಕೆ, ಸಿತಾರ ಶೆರಿನ್, ರಶ್ಮಿತಾ ರೈ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಕಾವು ಸಮುದಾಯ ಭವನದಿಂದ ರಾಜ್ಯ ಹೆದ್ದಾರಿ ಬದಿಯಲ್ಲಿನ ಕಸಗಳನ್ನು ಸಂಗ್ರಹಿಸಿ ಪಂಚಾಯತ್‌ನ ತ್ಯಾಜ್ಯ ಸಂಗ್ರಹಣಾ ವಾಹನದಲ್ಲಿ ಸೂಕ್ತ ವಿಲೇವಾರಿ ಮಾಡಲಾಯಿತು. ಗ್ರಾ.ಪಂ ಸಿಬ್ಬಂದಿ ಶಶಿಕುಮಾರ್ ಡಿ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕದ ಸಿಬಂದಿಗಳು ಸಹಕರಿಸಿದ್ದರು.

 

LEAVE A REPLY

Please enter your comment!
Please enter your name here