ಕನ್ಯಾನ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0

 

ವಿಟ್ಲ: ಎಸ್. ಎಸ್. ಎಲ್. ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14 ವ.)ರವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.  ತನ್ನ ಮನೆಯವರೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತ್ಮಿಕಾ ಮನೆಮಂದಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here