ಪೆರಾಬೆ ಗ್ರಾ.ಪಂ.ಅಧ್ಯಕ್ಷರಾಗಿ ಮೋಹನ್‌ದಾಸ ರೈ ಅವಿರೋಧ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಪೆರಾಬೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಮೋಹನ್‌ದಾಸ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಚಂದ್ರಶೇಖರ ರೈಯವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮೇ ೫ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಕಡಬ ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿಯವರು ಚುನಾವಣಾಧಿಕಾರಿಯಾಗಿದ್ದರು.

ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪೆರಾಬೆ ೧ನೇ ವಾರ್ಡ್‌ನಿಂದ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಮೋಹನ್‌ದಾಸ ರೈಯವರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧವಾಗಿ ಆಯ್ಕೆಗೊಂಡರು. ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಸಂಧ್ಯಾ ಕೆ., ಸದಸ್ಯರುಗಳಾದ ಚಂದ್ರಶೇಖರ ರೈ, ಕೃಷ್ಣ ವೈ, ಸದಾನಂದ ಕೆ., ಪಿ.ಜಿ.ರಾಜು, ಮಮತಾ, ಸುಶೀಲ ಉಪಸ್ಥಿತರಿದ್ದರು. ಸದಸ್ಯರುಗಳಾದ ಬಿ.ಕೆ.ಕುಮಾರ್, ಮೇನ್ಸಿ ಸಾಜನ್, ಮೋಹಿನಿ, ಸಿ.ಎಂ.ಫಯಾಜ್, ಲೀಲಾವತಿ, ವೇದಾವತಿ, ಕಾವೇರಿ ಗೈರು ಹಾಜರಿಯಾಗಿದ್ದರು. ಕಡಬ ತಾ.ಪಂ.ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ, ಪಿಡಿಒ ಶಾಲಿನಿ ಕೆ.ಬಿ.ಯವರು ಸಹಕರಿಸಿದರು. ೧೫ ಸದಸ್ಯ ಬಲದ ಪೆರಾಬೆ ಗ್ರಾಮ ಪಂಚಾಯಿತಿಯಲ್ಲಿ ೯ ಬಿಜೆಪಿ ಬೆಂಬಲಿತ, ೪ ಕಾಂಗ್ರೆಸ್ ಬೆಂಬಲಿತ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕಳೆದ ೧ ವರ್ಷದಿಂದ ಅಧ್ಯಕ್ಷರಾಗಿದ್ದ ಚಂದ್ರಶೇಖರ ರೈಯವರು ವೈಯಕ್ತಿಕ ಕಾರಣ ನೀಡಿ ಮಾ.೯ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ಉಳಿದ ಒಂದೂವರೇ ವರ್ಷದ ಅವಧಿಗೆ ಮೋಹನ್‌ದಾಸ ರೈಯವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.