ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

0

 

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಮೇ. 5ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜರಗಿತು.


ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಉದ್ಘಾಟಿಸಿದರು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಗಣರಾಜ ಕುಂಬ್ಳೆಯವರು ಕನ್ನಡ ಮನಸ್ಸುಗಳ ಮೇಲೆ ಕ.ಸಾ .ಪ. ಬೀರಿದ ಪ್ರಭಾವದ ಬಗ್ಗೆ ಉಪನ್ಯಾಸಗೈದರು. ಮುಖ್ಯ ಅತಿಥಿಗಳಾಗಿ ಬಾಲಚಂದ್ರ ಮುಚ್ಚಿಂತಾಯ, ಪುಷ್ಪಾವತಿ, ಗ್ರೇಸಿ ಪಿಂಟೋ ಉಪಸ್ಥಿತರಿದ್ದರು. ಕಸಾಪ ಕಡಬ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಸತೀಶ್ ನಾಯಕ್ ಸ್ವಾಗತಿಸಿದರು. ಉಪನ್ಯಾಸಕ ವಸಂತಕುಮಾರ್ ಡಿ., ವಂದಿಸಿದರು. ರಾಮಕುಂಜ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಸುರಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here