ಕೊಡಾಜೆ: ಅಂಗಡಿಗಳಿಗೆ ಡಿಕ್ಕಿ ಹೊಡೆದ ಟೋಯಿಂಗ್-ಲಾರಿ ಚಾಲಕನಿಗೆ ಗಾಯ

0

ವಿಟ್ಲ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಘಟನೆ  ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.

 

 ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಟೋಯಿಂಗ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ, ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ. ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಮಂಗಳೂರಿನ  ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here