ಕನ್ಯಾನ: ಬಾಲಕಿಯ ಆತ್ಮಹತ್ಯೆ ಪ್ರಕರಣ – ಆರೋಪಿಯ ಬಂಧನ

0

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ವಿದ್ಯಾರ್ಥಿನಿ ಯೋರ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ಲಭಿಸಿದೆ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಮೂಲತಃ ಸುಳ್ಯ ತಾಲೂಕಿನ ಪಂಬೆತ್ತಾಡಿ ಮಂಚಿಕಟ್ಟೆ  ನಿವಾಸಿ, ಪ್ರಸ್ತುತ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿನ ಬಾಡಿಗೆ ಕೊಠಡಿಯಲ್ಲಿರುವ ಸಂಜೀವರರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳಿಗೆ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಕಿರುಕುಳ ನೀಡುತ್ತಿದ್ದು ಇದರಿಂದಾಗಿ ಆಕೆ ಆತ್ಮಹತ್ಯೆ ಮಾಡಿರುವುದಾಗಿ ಅವರು ನೀಡಿದ ದೂರಿನಲ್ಲಿ  ಆರೋಪಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿರುವ ವಿಟ್ಲ ಠಾಣಾ ಪೊಲೀಸರು ಆರೋಪಿಯನ್ಜು ಬಂಧಿಸುವಲ್ಲಿ ಸಫಲರಾಗುದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here