ಮೇ.7: ಡಿ.ದೇವರಾಜ ಅರಸು ಭವನ ನೂತನ ಕಟ್ಟಡ ಉದ್ಘಾಟನೆ

0

ಪುತ್ತೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಡಿ.ದೇವರಾಜ ಅರಸು ಭವನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ.೭ರಂದು ಮಧ್ಯಾಹ್ನ ೨ರಿಂದ ಸಾಲ್ಮರದಲ್ಲಿ ನಡೆಯಲಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸುನಿಲ್ ಕುಮಾರ್ ಉಪಸ್ಥಿತರಿರಲಿದ್ದಾರೆ. ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here