ಮೇ.20: ಬಲ್ನಾಡು ಗ್ರಾ.ಪಂನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ

0

ಪುತ್ತೂರು: ಬಲ್ನಾಡು ಗ್ರಾಮ ಪಂಚಾಯತ್‌ನ ವಾರ್ಡ್-1ರ ಸದಸ್ಯೆ ಯಮುನಾರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆಯು ಮೇ.20ರಂದು ನಡೆಯಲಿದೆ. ಹಿಂದುಳಿದ ವರ್ಗ `ಎ’ ಮಹಿಳಾ ಮೀಸಲು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಮೇ.5ರಂದು ಪ್ರಾರಂಭಗೊಂಡಿದ್ದು ಮೇ.10 ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮೇ.11ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ.13ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಮೇ.20ರಂದು ಮತದಾನ ನಡೆದು, ಮೇ.22ರಂದು ಮತ ಎಣಿಕೆ ಕಾರ್ಯಗಳು ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಕನಿಷ್ಕಚಂದ್ರ ಚುನಾವಣಾಧಿಕಾರಿಯಾಗಿ ಹಾಗೂ ಪಿಡಿಓ ಶರೀಫ್ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಳಿಯೂರುಕಟ್ಟೆ ಹಿ.ಪ್ರಾ ಶಾಲೆಯಲ್ಲಿ ತೆರೆಯಲಾಗಿರುವ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಒಟ್ಟು 1603 ಮತದಾರರು ಮತ ಚಲಾಯಿಸಲಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ಪ್ರಕ್ರಿಯೆ ನಡೆಯಲಿದೆ.

ಒಟ್ಟು 11 ಸ್ಥಾನಗಳನ್ನು ಒಳಗೊಂಡಿರುವ ಬಲ್ನಾಡು ಗ್ರಾ.ಪಂನಲ್ಲಿ ಕಳೆದ ಚುನಾವಣೆಯಲ್ಲಿ 9ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 2ಸ್ಥಾನಗಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಚುನಾಯಿತರಾಗಿದ್ದರು. ಈ ಪೈಕಿ ವಾರ್ಡ್-1ರ ಬಿಜೆಪಿ ಬೆಂಬಲಿತ ಸದಸ್ಯೆ ಯಮುನಾರವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here