ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಕಾರ್ಯಾಗಾರ ತರಂಗ-2022

0


ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ. ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ. ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ. ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ. ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಪುತ್ತೂರಿನ ಮುಳಿಯ ಜುವೆಲ್ಲರ್ಸ್ ನ ವ್ಯವಸ್ಥಾಪಕ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಇವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಕಾರ್ಯಾಗಾರ ತರಂಗ- 2022 ಕಾರ್‍ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸೂರ್ಯನಾಥ ಆಳ್ವರವರು ಮಾತನಾಡುತ್ತಾ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನ ಸಂಪನ್ನರಾಗಿ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕೆಂದರು ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ., ಕಾರ್‍ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಚಾರ್ಟರ್ಡ್ ಅಕೌಂಟೆಂಟ್ ಅನೀಶ್, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಸೌಮ್ಯ ಸ್ವಾಗತಿಸಿ, ಉಪನ್ಯಾಸಕರಾದ  ಶಶಿಕಲಾ ವಂದಿಸಿದರು. ಮಧುರಾ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here