ಬಲ್ನಾಡು ಗ್ರಾ.ಪಂ ಉಪ ಚುನಾವಣೆ-ಎರಡು ನಾಮಪತ್ರ ಸಲ್ಲಿಕೆ

0

ಪುತ್ತೂರು:ಬಲ್ನಾಡು ಗ್ರಾಮ ಪಂಚಾಯತ್‌ನ ವಾರ್ಡ್-1ರ ಸದಸ್ಯೆ ಯಮುನಾರವರ ನಿಧನದಿಂದ ತೆರವಾದ ಸ್ಥಾನಕ್ಕೆ ಮೇ.20ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಸಲು ಮೇ.10 ಅಂತಿಮ ದಿನವಾಗಿದ್ದು ಬಿಜೆಪಿ ಬೆಂಬಲಿತ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಳಿಂದ ಒಟ್ಟು ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದೆ.

ಹಿಂದುಳಿದ ವರ್ಗ `ಎ’ ಮಹಿಳಾ ಮೀಸಲು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಉಮಾವತಿ ಎಸ್ ಅಟ್ಲಾರು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾ.ಪಂನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ನಾಮಪತ್ರ ಸಲ್ಲಿಸಿದ್ದಾರೆ. ಮೇ.11ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದ್ದ ಎರಡೂ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.

ಮೇ.13 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನ:
ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಮೇ.13ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಮೇ.20ರಂದು ಮತದಾನ ನಡೆದು, ಮೇ.22ರಂದು ಮತ ಎಣಿಕೆ ಕಾರ್ಯಗಳು ನಡೆದು ಫಲಿತಾಂಶ ಘೋಷಣೆಯಾಗಲಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಕನಿಷ್ಕಚಂದ್ರ ಚುನಾವಣಾಧಿಕಾರಿಯಾಗಿ ಹಾಗೂ ಪಿಡಿಓ ಶರೀಫ್ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here