ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಮುಖರು ಬಿಜೆಪಿ ಸೇರ್ಪಡೆ

0

ಪುತ್ತೂರು; ಕಲ್ಲೇಗದ ಭಾರತ್ ಮಾತಾ ಸಮುದಾಯ ಭವನದಲ್ಲಿ ಮೇ.11 ರಂದು ಸಂಸದರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಡೆದ ಬಿಜೆಪಿ ನಗರ ಮಂಡಲದ ಬೂತ್ ಪ್ರಮುಖರ ಸಭೆಯಲ್ಲಿ ಕಾಂಗ್ರೆಸ್ ನ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ನಗರ ಸಭಾ ಮಾಜಿ ಸದಸ್ಯೆ ಸ್ವರ್ಣಲತಾ ಹೆಗ್ಡೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸತೀಶ್ ನಾಕ್ ಪರ್ಲಡ್ಕ, ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ರವರನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.

ಶಾಸಕ ಸಂಜೀವ ಮಠಂದೂರು, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here