ಸುಪ್ರೀಂಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜರವರನ್ನು ಭೇಟಿಯಾದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್

0

  • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಸಮಾಲೋಚನೆ

 

 

ಪುತ್ತೂರು: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್‌ರವರು ಸುಪ್ರೀಂಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ನಟರಾಜ್ ಅವರೊಂದಿಗೆ ಶಿವರಾಜ್ ಸಿಂಗ್ ಸಮಾಲೋಚನೆ ನಡೆಸಿದರು. ಪುತ್ತೂರು ಈಶ್ವರಮಂಗಲ ನಿವಾಸಿಯಾದ ಕೆ.ಎಂ.ನಟರಾಜ್‌ರವರು ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯವಾದಿಯಾಗಿ, ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಸುಪ್ರೀಂಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಲವು ಪ್ರಮುಖ ವಿಚಾರಗಳಲ್ಲಿ ಇವರು ಸರಕಾರದ ಪರ ವಾದ ಮಂಡಿಸಿ ಗಮನ ಸೆಳೆದಿದ್ದಾರೆ.LEAVE A REPLY

Please enter your comment!
Please enter your name here