ಅರಿಯಡ್ಕ ಗ್ರಾ.ಪಂ ವ್ಯಾಪ್ತಿಗೆ ಜಲಜೀವನ್ ಮಿಷನ್ ಯೋಜನೆಯಡಿ ರೂ.3.87 ಕೋಟಿ ಮಂಜೂರು-ಶಿಲಾನ್ಯಾಸ

0
  • ಅಂಬಟಮೂಲೆ-ಮಾಣಿಯಡ್ಕ ಕಾವು ಪಂಚಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ
  • ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಕೇಂದ್ರ ಸರಕಾರ ಸಾಕಾರಗೊಳಿಸಿದೆ-ನಳಿನ್ ಕುಮಾರ್ ಕಟೀಲ್

ಪುತ್ತೂರು: ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಕಾರಗೊಳಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.


ಮೇ.11ರಂದು ಕಾವು ಮಾಣಿಯಡ್ಕ ಮೈದಾನದ ಹತ್ತಿರ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮಂಗಳೂರು, ಲೋಕೋಪಯೋಗಿ ಇಲಾಖೆ ಮಂಗಳೂರು, ದ.ಕ ಜಿ.ಪಂ ಮಂಗಳೂರು, ತಾ.ಪಂ ಪುತ್ತೂರು ಹಾಗೂ ಅರಿಯಡ್ಕ ಗ್ರಾ.ಪಂ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 3.87ಕೋಟಿ ರೂ ಅನುದಾನದಡಿಯಲ್ಲಿ ಶಿಲಾನ್ಯಾಸ ಹಾಗೂ 2.30 ಕೋಟಿ ಅನುದಾನದಡಿ ಅಂಬಟಮೂಲೆ ಮಾಣಿಯಡ್ಕ ಕಾವು ಪಂಚಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರಿಂದ ಇಂದು ಕ್ಷೇತ್ರಕ್ಕೆ ಅನುದಾನ ಹರಿದು ಬರುತ್ತಿದೆ. ನಮಗೆ ಇಚ್ಚಾಶಕ್ತಿಯ ರಾಜಕಾರಣ ಬೇಕು. ಆಗ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದರು.

ನಮ್ಮ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ-ಸೌಮ್ಯಾ
ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯಾ ಬಾಲಸುಬ್ರಹ್ಮಣ್ಯ ಮಾತನಾಡಿ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿ ಹೆಚ್ಚಿನ ಅನುದಾನ ಬಿಡುಗಡೆಗೊಂಡಿದೆ ಎಂದು ಹೇಳಿ ಗ್ರಾ.ಪಂ ವತಿಯಿಂದ ಸಂಸದರಿಗೆ ಮತ್ತು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣುತ್ತಿದೆ-ಮಠಂದೂರು
ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ ದೇಶದಲ್ಲಿ ಪರಿವರ್ತನೆಯಾಗುತ್ತಿದ್ದು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣುತ್ತಿದೆ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗ್ರಾಮಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ತರುತ್ತಿದೆ. ಜನರ ಬೇಡಿಕೆಗಳನ್ನು ನಮ್ಮ ಸರಕಾರ ಈಡೇರಿಸುತ್ತಿದ್ದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಕ್ಷೇತ್ರವಾಗಬೇಕೆನ್ನುವುದೇ ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಗ್ರಾಮ ಕುಡಿಯುವ ನೀರು ನೈರ್ಮಲ್ಯ ಕಾರ್ಯಪಾಲಕ ಇಂಜಿನಿಯರ್ ನರೇಂದ್ರ ಬಾಬುರವರು ಜಲಜೀವನ್ ಮಿಷನ್ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ ಇ.ಒ ನವೀನ್ ಭಂಡಾರಿ, ಲೋಕೋಪಯೋಗಿ ಇಲಾಖೆ ಪುತ್ತೂರು ಇದರ ಸಹಾಯಕ ಕಾರ್ಯಪಾಲಕ ಅಭಿಯಂತರಾದ ರಾಜಾರಾಮ್, ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕರಾದ ರೂಪ್ಲ ನಾಯಕ್, ತಾ.ಪಂ ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅರಿಯಡ್ಕ ಗ್ರಾ.ಪಂ ಪಿಡಿಓ ಪದ್ಮಕುಮಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ವಿಜಿತ್ ಕಾವು, ಹರೀಶ್ ರೈ ಜಾರತ್ತಾರು, ಅಬ್ದುಲ್ ರಹಿಮಾನ್ ಕಾವು, ಮೋನಪ್ಪ ಪೂಜಾರಿ ಕೆರೆಮಾರು, ಅನಿತಾ ಆಚಾರಿಮೂಲೆ, ಹೇಮಾವತಿ ಚಾಕೋಟೆ, ರೇಣುಕಾ ಸತೀಶ್ ಮಡ್ಯಂಗಳ, ಪುಷ್ಪಲತಾ, ಭಾರತಿ ವಸಂತ್, ಮೀನಾಕ್ಷಿ ಪಾಪೆಮಜಲು, ನಾರಾಯಣ ನಾಯ್ಕ ಚಾಕೋಟೆ ಮತ್ತು ಪ್ರವೀಣ ಎ.ಬಿ, ಕಾವು ಸಿ.ಎ ಬ್ಯಾಂಕ್ ಅಧ್ಯಕ್ಷ ನನ್ಯ ಅಚ್ಯುತ್ತ ಮೂಡೆತ್ತಾಯ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ ಮತ್ತು ನಿತೀಶ್ ಶಾಂತಿವನ, ಉಪಾಧ್ಯಕ್ಷ ಹರಿಪ್ರಸಾದ್, ಅರಿಯಡ್ಕ ಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ರೈ ಪಾಪೆಮಜಲು, ಜಿ.ಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಪ್ರಜ್ವಲ್ ಕೆರೆಮಾರು, ಶಿವಪ್ರಸಾದ್ ಕೊಚ್ಚಿ, ಅರಿಯಡ್ಕ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಲೋಕೇಶ್ ರೈ ಅಮೈ, ಹರಿಪ್ರಸಾದ್ ಮಾಯಿಲಕೊಚ್ಚಿ, ಶ್ರೀಧರ್ ರಾವ್, ನವೀನ್ ನನ್ಯ, ನಿರಂಜನ್ ಕಾವು, ಅರುಣ್ ವಿಟ್ಲ, ಜಯಂತಿ ಬನ್ನೂರು, ಬಾಲಕೃಷ್ಣ ಭಟ್ ಇಂಜಿನಿಯರ್ ಮುಂತಾದವರು ಉಪಸ್ಥಿತರಿದ್ದರು.

ಗ್ರಾ.ಪಂ ಸದಸ್ಯ ಲೋಕೇಶ್ ಚಾಕೋಟೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ವಂದಿಸಿದರು. ತಿಲಕ್ ರೈ ಕುತ್ಯಾಡಿ ಹಾಗೂ ದಿವ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ:
ಅರಿಯಡ್ಕ ಗ್ರಾ.ಪಂ ವ್ಯಾಪ್ತಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿಕೊಟ್ಟ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಸಂಜೀವ ಮಠಂದೂರು ಅವರನ್ನು ಗ್ರಾ.ಪಂ ಸದಸ್ಯರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here