ವಿದ್ಯಾಮಾತಾ ಅಕಾಡೆಮಿಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಲಿಖಿತ ಪರೀಕ್ಷೆಗೆ ಪೂರ್ವ ತಯಾರಿ ಬಗ್ಗೆ ಉಚಿತ ತರಬೇತಿ ಶಿಬಿರ

0

ಪುತ್ತೂರು: ಮೇ.21-22 ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರವು ನಡೆಯಲಿದೆ.

ಮೇ. 14 ರಂದು ಸಮಾಜ ವಿಜ್ಞಾನ ವಿಷಯದ ಮೇಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 3.30 ರ ವರೆಗೆ ಮತ್ತು ಮೇ.15 ರಂದು ಗಣಿತ ಹಾಗೂ ವಿಜ್ಞಾನ ವಿಷಯದ ಮೇಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 3.30 ರ ವರೆಗೆ ಕಾರ್ಯಾಗಾರವು ನಡೆಯಲಿದೆ. ಲಿಖಿತ ಪರೀಕ್ಷೆಗೆ ಕಳೆದ 1 ತಿಂಗಳಿನಿಂದ ಅಭ್ಯರ್ಥಿಗಳಿಗೆ ತರಬೇತಿಯು ನಡೆಯುತ್ತಿದ್ದು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಸಹಾಯವಾಗಲು ಈ ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ‘ವಿದ್ಯಾಮಾತಾ ಅಕಾಡೆಮಿ’ಯ ಪ್ರಕಟಣೆ ತಿಳಿಸಿದೆ.

ಈ ಉಚಿತ ಕಾರ್ಯಾಗಾರದಲ್ಲಿ ಭಾಗವಹಿಸುವವರು 9148935808 / 8590773486 ಈ ಮೊಬೈಲ್ ಸಂಖ್ಯೆಗಳಿಗೆ ಕರೆಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಹಾಗೂ ತರಬೇತಿ ಕೇಂದ್ರ.
ಹಿಂದುಸ್ತಾನ್ ಬಿಲ್ಡಿಂಗ್, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು.ದ.ಕ.574201
ಫೋನ್ ನಂ: 9148935808 / 8590773486

LEAVE A REPLY

Please enter your comment!
Please enter your name here