ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಲಂಚ ಭ್ರಷ್ಟಾಚಾರ ನಿರ್ಮೂಲ ಜನಾಂದೋಲನಕ್ಕೆ ಬೆಂಬಲ ಫಲಕ ಅನಾವರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಸಿ ಎ ಸೈಮನ್

ಪುತ್ತೂರು: ಕಳೆದ ಹಲವು ದಿನಗಳಿಂದ ಲಂಚ ಮತ್ತು ಭ್ರಷ್ಟಾಚಾರ ನಿರ್ಮೂಲನದ ಕುರಿತಾಗಿ ನಡೆಯುತ್ತಿರುವ ಸುದ್ದಿ ಜನಾಂದೋಲನಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮಹತ್ತರ ಹೆಜ್ಜೆಯನ್ನಿಟ್ಟಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ, ಲಂಚ ವಿರೋಧಿ ನಾಮಫಲಕವನ್ನು ದರ್ಬೆಯ ಶ್ರೀರಾಮ ಸೌಧದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಕಚೇರಿಯ ಮುಂಭಾಗದಲ್ಲಿ ಅಳವಡಿಸಲು ತೀರ್ಮಾನಿಸಿದೆ. ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಸಿ ಎ ಸೈಮನ್ ಅವರು ಮೇ 13 ಶುಕ್ರವಾರ ಸಂಜೆ 4:30ಕ್ಕೆ ಫಲಕ ಅನಾವರಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುದ್ದಿ ಜನಾಂದೋಲನದ ಮುಖ್ಯಸ್ಥರಾದ ಡಾ. ಯುಪಿ ಶಿವಾನಂದ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೋಶಾಧ್ಯಕ್ಷ ಡಾ| ಹರ್ಷಕುಮಾರ್ ರೈ ಹಿರಿಯ ಸಾಹಿತಿಗಳಾದ ವಿ.ಬಿ. ಅರ್ತಿಕಜೆ ಮುಂತಾದವರು ಭಾಗಿಯಾಗಲಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.