ಬೊಬ್ಬೆಕೇರಿ ಶಾಲಾ ಮುಖ್ಯಗುರುಗಳಾಗಿ ಶಶಿಕಲಾ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರುಗಳಾಗಿ ಶಶಿಕಲಾ ಕೇನ್ಯ ಅವರು ಅಧಿಕಾರ ವಹಿಸಿಕೊಂಡರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಜನಾರ್ದನ ಹೇಮಳ ಅವರು ಅಧಿಕಾರ ಹಸ್ತಾಂತರಿಸಿದರು.


ಪಂಜ ಶಾಲೆಯಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಲಾ ಅವರು ಮುಂಬಡ್ತಿ ಹೊಂದಿ ಬೊಬ್ಬೆಕೇರಿ ಶಾಲೆಗೆ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಗೀತಾ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಶಾಲಾ ಎಸ್.ಡಿ.ಎಂ.ಸಿ ಸದಸ್ಯ ಸುಗಂಧ ಕುಮಾರ್ ಬಿರ್ನೆಲು, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಸೌಮ್ಯ ಪೈಕ, ಶಾಲಾ ಅಡುಗೆ ಸಿಬ್ಬಂದಿ ಶಶಿಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here