15 ವರ್ಷಕ್ಕಿಂತ ಹಳೆಯ ವಾಹನಗಳ ಫಿಟ್ನೆಸ್ ಪ್ರಮಾಣಪತ್ರ

0

  • ನವೀಕರಣಕ್ಕೆ ದುಬಾರಿ ದಂಡ
  • ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು:ನೋಂದಣಿ ಮತ್ತು ಫಿಟ್ನೆಸ್ ಪ್ರಮಾಣಪತ್ರ ನವೀಕರಣದ ಸಂದರ್ಭದಲ್ಲಿ 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಹೆಚ್ಚಿನ ಶುಲ್ಕ ಮತ್ತು ದಂಡ ವಿಧಿಸುವುದಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

 


ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲಕರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ರಜಾಕಾಲದ ಪೀಠ ಈ ಮಧ್ಯಂತರ ಆದೇಶ ನೀಡಿದೆ.ಎಪ್ರಿಲ್1, 2022ರಿಂದ ಜಾರಿಗೆ ಬರುವಂತೆ ಹೆಚ್ಚಿನ ಶುಲ್ಕ ಮತ್ತು ದಂಡವನ್ನು ವಿಧಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 2021ರ ಅಕ್ಟೋಬರ್ ೪ಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲಕರ ಸಂಘ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿತ್ತು.ನೋಂದಣಿ ನವೀಕರಣಕ್ಕೆ ಸಂಬಂಧಿಸಿದಂತೆ 10,000 ರೂ., ಭಾರೀ ಸರಕು ವಾಹನಗಳ ಫಿಟ್ನೆಸ್ ಪ್ರಮಾಣಪತ್ರ ನವೀಕರಣಕ್ಕೆ 1,500 ರೂ. ಮತ್ತು ಮಧ್ಯಮ ಸರಕು ವಾಹನಗಳಿಗೆ ಸಂಬಂಧಿಸಿದಂತೆ 1,300 ರೂ. ಪಾವತಿಸುವಂತೆ ನೋಂದಣಿ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ನ್ಯಾಯಪೀಠ ಇದೀಗ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧಿಸೂಚನೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

LEAVE A REPLY

Please enter your comment!
Please enter your name here