ಕೊಂಬೆಟ್ಟು ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ-ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ, ತಿಲಕ ಹಚ್ಚಿ ಶಾಲೆಗೆ ಬರ ಮಾಡಿಕೊಂಡ ಶಿಕ್ಷಕರು

0

  • ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದ ಶಾಸಕರು

 

 


ಪುತ್ತೂರು: ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೇ 16ರಂದು ಶಾಲಾ ಪ್ರಾರಂಭೋತ್ಸವ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ ಮಕ್ಕಳಿಗೆ ಆರತಿ ಬೆಳಗಿಸಿ, ತಿಲಕ ಇಟ್ಟು, ಹೂವು, ಸಿಹಿ ಹಂಚುವ ಮೂಲಕ ಮಕ್ಕಳನ್ನು ಪ್ರೀತಿಯಿಂದ ಸಂಭ್ರಮದ ಮೂಲಕ ಬರಮಾಡಿಕೊಂಡು ಸ್ವಾಗತಿಸಲಾಯಿತು.

 


ಶಿಕ್ಷಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ, ತಿಲಕ ಹಚ್ಚಿದರು. ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸದಸ್ಯ ಪಿ.ಜಿ ಜಗನ್ನಿವಾಸ ರಾವ್ ಅವರು ವಿದ್ಯಾರ್ಥಿಗಳಿಗೆ ಹೂ ಮತ್ತು ಚಾಕಲೇಟು ನೀಡಿ ಶಾಲೆಗೆ ಬರಮಾಡಿಕೊಂಡರು.

ಬಳಿಕ ಶಾಲಾ ಮೈದಾನದಲ್ಲಿ ಮಳೆ ಬಿಲ್ಲು 14 ದಿನದ ವಿವಿಧ ಚಟುವಟಿಕೆ ಕಾರ್ಯಕ್ರಮದ ಪ್ರದರ್ಶನವನ್ನು ಶಾಸಕರು ವೀಕ್ಷಣೆ ಮಾಡಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಲೋಕೇಶ್, ಶಿಕ್ಷಣ ಸಮನ್ವಯಾಧಿಕಾರಿ ಹರಿಪ್ರಸಾದ್, ಬಿಆರ್ ಸಿಯ ಶೋಭ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಸುರೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಶಾಲಾ ಉಪ ಪ್ರಾಂಶುಪಾಲ ವಸಂತ್ ಮೂಲ್ಯ, ಹಿರಿಯ ಶಿಕ್ಷಕಿ ಗೀತಾಮಣಿ, ಅರುಣಾ ಸೇರಿದಂತೆ ಎಸ್ ಡಿಎಂಸಿ ಸದಸ್ಯ ಸುರೇಶ್ ರೈ ಪಡ್ಡಂಬೈಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here