ಅರಿಯಡ್ಕ ಪಂಚಾಯತ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಂಘ ಕುಂಬ್ರ ಇದರ ಜಂಟಿ ಆಶ್ರಯದಲ್ಲಿ ಅರಿಯಡ್ಕ ಗ್ರಾಮದ ರೈತ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮಾಹಿತಿ ಕಾರ್ಯಾಗಾರ ಮೇ15 ರಂದು ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯಂ ರವರ ಅಧ್ಯಕ್ಷತೆಯಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಕಾರ್ಯಗಾರವನ್ನು ದೀಪ ಬೆಳಗಿಸಿ, ಕುಂಬ್ರ ಸಿ.ಎ ಬ್ಯಾಂಕಿನ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಉದ್ಘಾಟಿಸಿ ಶುಭ ಹಾರೈಸಿದರು. ಕೃಷಿ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿಯನ್ನು ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಪುತ್ತೂರು ಇದರ ಆಪ್ತ ಸಂಯೋಜಕರಾದ ಗೀತಾ ಎಂ, ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಶುಭಕರ , ಕುಂಬ್ರ ಸಿ.ಎ ಬ್ಯಾಂಕ್ ನ ಸಿ.ಇ.ಓ ಭವಾನಿ ಬಿ.ಆರ್ ನೀಡಿದರು.

 

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ್ ಮಣಿಯಾಣಿ ಕುತ್ಯಾಡಿ,ಸಿ.ಎ ಬ್ಯಾಂಕಿನ ಉಪಾಧ್ಯಕ್ಷ ಉಮೇಶ್ ಗೌಡ ಕನ್ನಯ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಿ.ಎ ಬ್ಯಾಂಕಿನ ನಿರ್ದೇಶಕರು, ಅಪಾರ ಸಂಖ್ಯೆಯ ಕೃಷಿಕರು ಉಪಸ್ಥಿತರಿದ್ದರು. ಪಿ.ಡಿ.ಓ ಪದ್ಮಕುಮಾರಿ, ಸ್ವಾಗತಿಸಿ, ಪಂಚಾಯತ್ ಸದಸ್ಯ ಹರೀಶ್ ರೈ ಜಾರತ್ತಾರು ವಂದಿಸಿದರು. ಪಂಚಾಯತ್ ಸಿಬ್ಬಂದಿ ಪ್ರಭಾಕರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here