ಸವಣೂರು ವಲಯದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಶಾಖೆ ಪ್ರಾರಂಭಿಸುವ ಕುರಿತು ಸಮಾಲೋಚನಾ ಸಭೆ

0

ಪುತ್ತೂರು : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 8ನೇ ಶಾಖೆಯನ್ನು ಸವಣೂರು ವಲಯದಲ್ಲಿ ಪ್ರಾರಂಭಿಸುವ ಬಗ್ಗೆ ಸಮಾಲೋಚನಾ ಸಭೆಯು ಸವಣೂರು ಯುವ ಸಭಾಭವನದಲ್ಲಿ ಮೇ.15ರಂದು ನಡೆಯಿತು.

 

ಪುತ್ತೂರು ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷರಾದ ಮೋಹನ ಗೌಡ ಇಡ್ಯಡ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಾರಂಭದಲ್ಲಿ ಸಮುದಾಯದವರನ್ನು ಒಟ್ಟು ಸೇರಿಸುವ ಸಂದರ್ಭ ಮತ್ತು ಸಮುದಾಯ ಭವನ ನಿರ್ಮಾಣ ಹಾಗೂ ಸಮುದಾಯ ಪತ್ತಿನ ಸಹಕಾರ ಸಂಘವನ್ನು ರಚನೆ ಮಾಡುವ ಸಂದರ್ಭದಲ್ಲಿ ಸಮುದಾಯದ ಅನೇಕ ಹಿರಿಯರ ಶ್ರಮವಿದೆ. ಈ ಶ್ರಮದಿಂದ ಫಲದಿಂದ ಪ್ರಸ್ತುತ ಒಕ್ಕಲಿಗ ಸಮುದಾಯವು ಅಭಿವೃದ್ಧಿಯತ್ತ ಸಾಗುತ್ತಿದೆ. ಇನ್ನೂ ಮುಂದೆಯೂ ಯುವಕರು ಸಮುದಾಯದ ನಾಯಕತ್ವವನ್ನು ವಹಿಸಿಕೊಂಡು ಇನ್ನೂ ಹೆಚ್ಚಿನ ಅಭಿವೃದ್ಧಿಯತ್ತ ಸಾಗಲು ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿಯವರು ಒಕ್ಕಲಿಗ ಸಮುದಾಯ ಪತ್ತಿನ ಸಂಘದ ಪ್ರಸ್ತುತ ಅಭಿವೃದ್ಧಿ, ಬೆಳವಣಿಗೆ, ಕಾರ್ಯಯೋಜನೆ ಹಾಗೂ ಸವಣೂರು ವಲಯದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ೮ನೇ ಶಾಖೆಯನ್ನು ಪ್ರಾರಂಭಿಸುವ ಬಗ್ಗೆ ಮಾಹಿತಿ, ಮಾಗದರ್ಶನ ನೀಡಿದರು. ಪುತ್ತೂರು ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಮಾತನಾಡಿ, ಸಂಘದ ಬೆಳವಣಿಗೆಗೆ ಸಮುದಾಯದ ಎಲ್ಲರ ಸಹಕಾರ ಅಗತ್ಯ. ಪ್ರಸ್ತುತ ಒಕ್ಕಲಿಗ ಸಂಘದಲ್ಲಿ ಒಕ್ಕಲಿಗ ಸೇವಾ ಸಂಘ, ಯುವ ಒಕ್ಕಲಿಗ ಸೇವಾ ಸಂಘ, ಮಹಿಳಾ ಒಕ್ಕಲಿಗ ಸೇವಾ ಸಂಘ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್, ಒಕ್ಕಲಿಗ ಸಮುದಾಯ ನ್ಯಾಯ ಸಮಿತಿ ಹೀಗೆ ವಿವಿಧ ಸಂಘಟನೆಗಳು ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಸಂಘಗಳ ಪದಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನಷ್ಟೂ ಸಂಘಗಳ ಅಭಿವೃದ್ಧಿಗೆ ಸಮುದಾಯದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು. ಪುತ್ತೂರು ಎ.ಪಿ.ಎಂ.ಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ಸವಣೂರು ವಲಯದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ತೇಜಸ್ವಿನಿ, ಪುತ್ತೂರು ಯುವ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಕೆ.ಕೆಡೆಂಜಿ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ವೇದಿಕಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ನಿರ್ದೇಶಕ ವಸಂತ ವೀರಮಂಗಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here