ಬೊಬ್ಬೆಕೇರಿ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಸ. ಹಿ. ಪ್ರಾ. ಶಾಲೆ ಬೊಬ್ಬೆಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ, ಸಿಹಿ ತಿಂಡಿ ನೀಡುವುದರೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಸಭಾ ಕಾರ್ಯಕ್ರಮವನ್ನು ಕಾಣಿಯೂರು ಗ್ರಾ.ಪಂ.ಸದಸ್ಯೆ ಸುನಂದಾ ಅಬ್ಬಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪೋಷಕರ ಸಭೆಯನ್ನು ನಡೆಸಿ, ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ರಾದ ತೀರ್ಥ ಕುಮಾರ್ ವಹಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶಶಿಕಲಾ ಎಂ. ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಜನಾರ್ದನ ರವರು ನಿರೂಪಿಸಿದರು, ಇತರ ಶಿಕ್ಷಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here