ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

 

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆಯಲ್ಲಿ  ಶಾಲಾ ಪ್ರಾರಂಬೊತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕ್ ಪಂಚಾಯತ್ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ  ರಾಧಾಕೃಷ್ಣ ಬೋರ್ಕರ್ ದೀಪ ಬೆಳಗಿಸಿ ಶುಭಹಾರೈಸಿದರು.

 

ಅಧ್ಯಕ್ಷತೆಯನ್ನು ಶಾಲಾ ಮ್ಯಾನೇಜರ್ ಭಗಿನಿ. ಪ್ರಶಾಂತಿ ಬಿ. ಎಸ್. ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಂತ ಫಿಲೋಮಿನ ಕಾಲೇಜು ದರ್ಬೆ ಪುತ್ತೂರು ಇದರ ಜೀವಶಾಸ್ತ್ರ ಉಪನ್ಯಾಸಕರಾದ ಸುಪ್ರೀತ್ ಕೆ. ಸಿ. ಮಾತನಾಡಿ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ, ಪೋಷಕರು, ಹಾಗೂ ಶಿಕ್ಷಕರ ಜವಾಬ್ದಾರಿಗಳು ಎನ್ನುವ ವಿಷಯದಲ್ಲಿ ಉಪನ್ಯಾಸ ನೀಡಿದರು. ವೇದಿಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಘುನಾಥ್ ರೈ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ  ರಾಮಚಂದ್ರ ಭಟ್, ನಿಕಟ ಪೂರ್ವ ಉಪಾಧ್ಯಕ್ಷರಾದ ರಮೇಶ್. ಕೆ. ವಿ, ಹಾಗೂ ಹಿರಿಯ ವಿದ್ಯಾರ್ಥಿ ಸಂದೇಶ್ ರೈ ಉಪಸ್ಥಿತರಿದ್ದರು. ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here