ಪರ್ಲಡ್ಕ ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ಪರ್ಲಡ್ಕ ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮೇ.16ರಂದು ನಡೆಯಿತು. ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಚಿತ್ರ ಶಾಲಾ ಮಕ್ಕಳಿಗೆ ಆರತಿ ಬೆಳಗಿ, ಪೆನ್ ಹಾಗೂ ಸಿಹಿ ನೀಡಿ ಸ್ವಾಗತಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಭಟ್, ಶಿಕ್ಷಕಿ ವಾಣಿಶ್ರೀ, ಉದಯಕುಮಾರ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷರು, ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ವಿಕ್ರಂ ಪರ್ಲಡ್ಕ, ಶ್ರೀಧರ್, ಸೌಮ್ಯ, ಸೀತಾಲಕ್ಷ್ಮೀ, ಜಯಲಕ್ಷ್ಮಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸುಂದರಿ ಕೆ. ಧನ್ಯವಾದಗೈದರು.

 

LEAVE A REPLY

Please enter your comment!
Please enter your name here