ಕೋಡಿಂಬಾಡಿ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಪ್ರಾರಂಭ

0

ಪುತ್ತೂರು : ಕೋಡಿಂಬಾಡಿ ಹಿ.ಪ್ರಾ.ಶಾಲೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಿದ ಶಾಲಾ ಆವರಣಕ್ಕೆ ವಿದ್ಯಾರ್ಥಿಗಳನ್ನು ಆರತಿ ಬೆಳಗಿಸಿ ಸ್ವಾಗತಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಿ.ಎಚ್.ಒ ಗುರುರಾಜ್, ಆರೋಗ್ಯ ಸುರಕ್ಷಾ ಅಧಿಕಾರಿ ಸಿ.ಎಂ ಶೀಲಾರವರು ಡೆಂಗ್ಯೂ ಮತ್ತು ಮಲೇರಿಯಾ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರಾದ ವಿಶ್ವನಾಥ ಮತ್ತು ಎಸ್‌ಡಿಎಂಸಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಪುಷ್ಪಾವತಿ ಕೆ. ಕಲಿಕಾ ಚೇತರಿಕೆ ಬಗ್ಗೆ ವಿವರಿಸಿದರು.


ಆಶಾ ಕಾರ್ಯಕರ್ತೆಯರಾದ ಪವಿತ್ರಾ ಮತ್ತು ಸುಪ್ರೀತಾ, ಪೋಷಕರು, ದಾನಿಗಳು, ಹಿರಿಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಭಾಗವಹಿಸಿದ್ದರು. ೭ನೇ ತರಗತಿಯ ನಿಧೀಶ್ ಶೆಟ್ಟಿ ಪ್ರಾರ್ಥಿಸಿ ಪ್ರಭಾರ ಮುಖ್ಯ ಗುರು ಲಕ್ಷ್ಮಿ ಕೆ. ಸ್ವಾಗತಿಸಿದರು. ಶಿಕ್ಷಕಿ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಪ್ರಭು ವಂದಿಸಿದರು. ಗೌರವ ಶಿಕ್ಷಕರಾದ ನಿರ್ಮಲ ಬಿ. ಹಾಗೂ ಅಶ್ವಿತಾ ಸಹಕರಿಸಿದರು. ಸುರೇಶ್ ಶೆಟ್ಟಿ ಸಿಹಿ ತಿಂಡಿ ವಿತರಿಸಿದರು.

LEAVE A REPLY

Please enter your comment!
Please enter your name here