ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಚಿವರಿಗೆ ಕನ್ನಡ ಶಾಲಿನ ಗೌರವ

0

ಪುತ್ತೂರು: ಪರ್ಲಡ್ಕದಲ್ಲರುವ ಡಾ| ಶಿವರಾಮ ಕಾರಂತರ ಬಾಲವನಕ್ಕೆ ಭೇಟಿ ನೀಡಿದ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡದ ಶಾಲು ಹೊದೆಸಿ ಗೌರವಿಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಅವರು ಸಚಿವರಿಗೆ ಕನ್ನಡದ ಶಾಲು ಹೊದೆಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕುಮಾರ್, ಸಹಾಯಕ ಕಮೀಷನರ್ ಗಿರೀಶ್‌ನಂದನ್, ಹಿರಿಯ ಸಾಹಿತಿ ಪ್ರೊ. ವಿ.ಬಿ.ಅರ್ತಿಕಜೆ, ಡಾ. ವರದರಾಜ್‌ಚಂದ್ರಗಿರಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here