ಸರ್ವೆ ಎಸ್‌ಜಿಎಂ ಪ್ರೌಢ ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ಸರ್ವೆ ಎಸ್‌ಜಿಎಂ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿನೂತನ ರೀತಿಯಲ್ಲಿ ಆಯೋಜಿಸಲಾಯಿತು. ಊರ ವಿದ್ಯಾಭಿಮಾನಿಗಳಾದ ಕಲ್ಲಮ ಗುರುರಾಘವೇಂದ್ರ ಮಠದ ವ್ಯವಸ್ಥಾಪಕರಾದ ಡಾ. ಸೀತಾರಾಮ ಭಟ್ ಕಲ್ಲಮ ಇವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮುಂಡೂರು ಗ್ರಾ.ಪಂ ಸದಸ್ಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರೂ ಆದ ಕಮಲೇಶ್ ಸರ್ವೆದೋಳಗುತ್ತು ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಪ್ರಗತಿ ಸಾಧಿಸಲು ಮಾಡಬೇಕಾದ ಕರ್ತವ್ಯಗಳ ಬಗ್ಗೆ ಸಲಹೆಗಳನ್ನು ನೀಡಿ, ವಿದ್ಯಾರ್ಥಿಗಳ ಉನ್ನತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕರು ಕೊಡುಗೆಯಾಗಿ ನೀಡಿದ ಲೇಖನಿಗಳನ್ನು ನೂತನ ವಿದ್ಯಾರ್ಥಿಗಳಿಗೆ ನೀಡುವುದರೊಂದಿಗೆ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಮಳೆಬಿಲ್ಲು, ಕಲಿಕಾ ಚೇತರಿಕಾ ಕಾರ್ಯಕ್ರಮಗಳ ಬಗ್ಗೆ, ಶಾಲಾ ಶಿಸ್ತು, ಸ್ವಚ್ಛತೆ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಡಾ.ಯಾದವಿ ಜಯಕುಮಾರ್‌ರವರು ವಿದ್ಯಾರ್ಥಿಗಳು ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಂಡು ಕಲಿಕೆಯಲ್ಲಿ ಉನ್ನತಿಯನ್ನು ಹೊಂದಬೇಕೆಂದು ಹೇಳಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮಹಾಬಲ ರೈಹಾಗೂ ಜಯಂತ್ ಬೇಕಲ್ ಸಂದರ್ಭೋಚಿತವಾಗಿ ಮಾತನಾಡಿದರು.

 

ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸುರೇಶ್ ಆಚಾರ್ಯ ಹಾಗೂ ನೂತನ ಅಧ್ಯಕ್ಷ ಅಶೋಕ್ ಎಸ್.ಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಂಡೂರು ಗ್ರಾ.ಪಂ ಸದಸ್ಯೆ ಕಾವ್ಯ, ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ಕುಸುಮಾವತಿ, ಸದಸ್ಯರಾದ ಭವಾನಿ, ಹರಿಣಾಕ್ಷಿ,ರಾದಾಕೃಷ್ಣ ಭಟ್, ಕೇಶವ ವಿ ಕೆ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಪುಷ್ಪಾ ಸ್ವಾಗತಿಸಿದರು. ಶಿಕ್ಷಕ ಮೋಹನ್ ಕುಮಾರ್ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here