ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ

0

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೇ 16ರ ರಾತ್ರಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ.ಸುನಿಲ್ ಕುಮಾರ್ ಭೇಟಿ ನೀಡಿದರು.ಬಳಿಕ ಅವರು ದೇವಳದ ಆಡಳಿತ ಮಂಡಳಿಯವರೊಂದಿಗೆ ದೇವಳದ ಅಭಿವೃದ್ಧಿ ಕಾರ್ಯಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಸಚಿವರಿಗೆ ಶಾಲು ಹೊದಿಸಿದರು. ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ರಾಮದಾಸ್ ಗೌಡ, ಡಾ.ಸುಧಾ ಎಸ್ ರಾವ್, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here