ಪಾಣಾಜೆ ಸುಬೋಧ ಪ್ರೌಢಶಾಲೆ ಪ್ರಾರಂಭೋತ್ಸವ

0

ಪಾಣಾಜೆ: ಸುಬೋಧ ಪ್ರೌಢಶಾಲೆ ಪಾಣಾಜೆ ಆರ್ಲಪದವು ಇದರ 2022-2023 ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ಮೇ.16 ರಂದು ನಡೆಯಿತು. ಶಾಲಾ ಸಂಚಾಲಕ  ಜಿ. ಮಹಾಬಲೇಶ್ವರ ಭಟ್ಟ್  ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ಚಾಕಲೇಟನ್ನು ನೀಡಿ ಶಾಲೆಯ ಬಗ್ಗೆ ವಿವರವಾದ ಮಾಹಿತಿಯನ್ನು ಹೇಳಿ ಶುಭ ಹಾರೈಸಿದರು. 
ಶಾಲೆಯ ಮುಖ್ಯಗುರು ಶ್ರೀಪತಿ ಇಂದಾಜೆ ಅವರು ಸ್ವಾಗತಿಸಿದರು.ವಿದ್ಯಾರ್ಥಿಗಳಿಗೆ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನುನೀಡಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ  ವಂದಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭಾವೈಕ್ಯತಾ ಗೀತೆಗಳನ್ನು ಹಾಡುವುದರ ಮೂಲಕ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು.ಸಹ ಶಿಕ್ಷಕರು,  ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here