ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಅಪಘಾತ-ಬೈಕ್ ಸವಾರನಿಗೆ ತೀವ್ರ ಗಾಯ

0


ಪುತ್ತೂರು: ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಮೇ. 18ರಂದು ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿಯ ರಸ್ತೆಯಾಗಿ ತೆಂಕಿಲ ನೂಜಿ ಬಳಿ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here