ನಾವು ಸೇವಿಸುವ ಆಹಾರ ನಮ್ಮ ಮನಸ್ಥಿತಿಗೆ ಕಾರಣ

0

  • ಬೆಟ್ಟಂಪಾಡಿ ಕಾಲೇಜಿನ ಎನ್.ಎಸ್.ಎಸ್. ಶಿಬಿರದಲ್ಲಿ ಡಾ. ಪ್ರಮೋದ್ ಎಮ್ ಜಿ

ಪುತ್ತೂರು: ಆಧುನಿಕ ಜೀವನಶೈಲಿ ಆಹಾರ ಪದ್ಧತಿಯ ಮೇಲೆ ತೀವ್ರವಾದ ಪರಿಣಾಮ ಬೀರುತ್ತಿದ್ದು ಮನುಷ್ಯನ ಮನಸ್ಥಿತಿಯ ಬದಲಾವಣೆಗೆ ಪ್ರಮುಖ ಕಾರಣ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಡಾ. ಪ್ರಮೋದ್ ಎಮ್ ಜಿ ಇವರು ಹೇಳಿದರು. ಅಲ್ಲದೆ ನಮ್ಮ ಸ್ವಭಾವ, ಸಂಸ್ಕೃತಿ ಸರಿ ಇದ್ದರೆ ನಮ್ಮ ಭವಿಷ್ಯವು ಸುಂದರವಾಗಿರುತ್ತದೆ. ಯಾವ ಸಮಯದಲ್ಲಿ ಏನನ್ನು ತಿನ್ನಬೇಕು, ಯಾವ ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ಸರಿಯಾಗಿ ನಿರ್ಧರಿಸಬೇಕು ಎಂದು ಅಭಿಪ್ರಾಯಪಟ್ಟರು. ಇವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುಣಚ ಗ್ರಾಮ ಪಂಚಾಯಿತಿಯ ಸದಸ್ಯರಾದ ಮಹೇಶ್ ಶೆಟ್ಟಿ ಬೈಲಗುತ್ತು ಇವರು ಸಹಾಯ, ತ್ಯಾಗ, ಸಮರ್ಪಣೆಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅರ್ಥಪೂರ್ಣ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ನವೀನ್ ಭಂಡಾರಿ ಇವರು ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ವೀಣಾ ಕುಮಾರಿ ಎಸ್ ಸ್ವಾಗತಿಸಿದರು, ನಿತೀಶ್ ಕುಮಾರ್ ಮುಖ್ಯ ಅತಿಥಿಗಳ ಪರಿಚಯ ನೀಡಿದರು, ಸುಪ್ರಿಯಾ ವಂದನಾರ್ಪಣೆಗೈದರು, ಲಿಖಿತಾ ಕೆ ಮತ್ತು ಭಾವನಾ ಕೆ ಜೆ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here