ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ

0

  • ಸರಕಾರ, ರಾಜಕೀಯ ಪಕ್ಷಗಳಿಂದ ಸಮುದಾಯದ ನಿರ್ಲಕ್ಷ್ಯ-ನಲ್ಕ ಗೋಪಾಲಕೃಷ್ಣ ಆಚಾರ್ಯ
  • ಸಮುದಾಯದ ನಿರ್ಲಕ್ಷ್ಯ ವಿರುದ್ಧ ಜಿಲ್ಲೆಯಲ್ಲಿ ಸಂಘಟಿತ ಹೋರಾಟ-ಜನಾರ್ದನ ಆಚಾರ್ಯ

 

ಪುತ್ತೂರು: ವಿಶ್ವಕರ್ಮ ಸಮಾಜದ ಪಂಚ ಕುಲಕಸುಬುಗಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಸಮುದಾಯದ ಆರ್ಥಿಕ ದೃಢತೆ ಹಾಗೂ ಸಾಮಾಜಿಕವಾಗಿ ಬೆಳೆಯಲು ಸಮುದಾಯದಿಂದ ಸಂಘದ ಜತೆಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬಂದು ಸಮಾಜವನ್ನು ಮುನ್ನಡೆಸಬೇಕು ಎಂದು ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷರಾದ ನಲ್ಕ ಗೋಪಾಲಕೃಷ್ಣ ಆಚಾರ್ಯರವರು ಹೇಳಿದರು. ಅವರು ಮೇ 17ರಂದು ಪುತ್ತೂರು ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಹಾಗೂ ರಾಜಕೀಯ ಪಕ್ಷದವರು ವಿಶ್ವಕರ್ಮ ಸಮಾಜವನ್ನು ಬಹಳವಾಗಿ ನಿರ್ಲಕ್ಷಿಸುತ್ತಿದ್ದು, ಇದು ನೋವಿನ ಸಂಗತಿ ಎಂದವರು ಹೇಳಿದರು.

 

ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಕಾಣಿಯೂರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಎರಡು ದೊಡ್ಡ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ಸಹಕಾರ ಸಂಘ, ಕೈಗಾರಿಕಾ ಕೇಂದ್ರ ಸಂಘವನ್ನು ಸಂಘ ಇಪ್ಪತ್ತೈದು ವರ್ಷ ಪೂರೈಸುವ ಸಂದರ್ಭದಲ್ಲಿ ಇದು ಕಾರ್ಯರೂಪಕ್ಕೆ ತರುವ ಆಶಯ ಸಂಘದ ಮುಂದಿದೆ. ಸಮುದಾಯವನ್ನು ರಾಜಕೀಯವಾಗಿ ನಿರ್ಲಕ್ಷ್ಯ ಮಾಡಿರುವುದಕ್ಕೆ ಇಡೀ ಜಿಲ್ಲೆಯಲ್ಲಿ ಸಂಘಟಿತ ಹೋರಾಟ ಮಾಡಲಾಗುವುದು ಎಂದರು.

 

ಸಂಘದ ಗೌರವ ಸಲಹೆಗಾರರಾದ ಪ್ರೊ| ಪ್ರಭಾಕರ ಆಚಾರ್ಯ ನೆಹರುನಗರ, ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಸಂಜೀವ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ವಿಶ್ವಬ್ರಾಹ್ಮಣ ಸೇವಾ ಸಂಘದ ಕಾರ್ಯದರ್ಶಿ ಶ್ರೀಧರ ಆಚಾರ್ಯ, ಉಪಾಧ್ಯಕ್ಷರಾದ ರಮೇಶ ಆಚಾರ್ಯ, ಗುರುಸೇವಾ ಪರಿಷತ್‌ನ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಸುರೇಶ್ ಆಚಾರ್ಯ ಅಬೀರ, ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಗುರುಪ್ರಸಾದ್ ಆಚಾರ್ಯ ವಾರ್ಷಿಕ ವರದಿ ವಾಚಿಸಿ, ಕೋಶಾಧಿಕಾರಿ ಸಂತೋಷ್ ಆಚಾರ್ಯ ಕಡೇಶ್ವಾಲ್ಯ ಲೆಕ್ಕಪತ್ರ ಮಂಡಿಸಿದರು. ಸಂಘದ ಕಾರ್ಯಾಧ್ಯಕ್ಷೆ ಪ್ರಭಾಹರೀಶ್ ಆಚಾರ್ಯ ಸ್ವಾಗತಿಸಿದರು. ಸಂಘದ ಗೌರವ ಸಲಹೆರಗಾರ ಉದಯಕುಮಾರ್ ಆಚಾರ್ಯ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಜಗದೀಶ ಆಚಾರ್ಯ ವಂದಿಸಿದರು.

LEAVE A REPLY

Please enter your comment!
Please enter your name here