ಬಿಜೆಪಿ ಕಾರ್ಯಕರ್ತ ಲಕ್ಷ್ಮಣ ಗೌಡ ಬೆದ್ರಂಗಳ ನಿಧನ

0

 

ಕಾಣಿಯೂರು: ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಬೆದ್ರಂಗಳ ನಿವಾಸಿ ಬಿಜೆಪಿ ಸಕ್ರೀಯ ಕಾರ್ಯಕರ್ತ ಲಕ್ಷ್ಮಣ ಗೌಡ ಬೆದ್ರಂಗ (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರೀಯರಾಗಿದ್ದುಕೊಂಡು ಪ್ರಸ್ತುತ ಬೆಜೆಪಿ ಬೊಬ್ಬೆಕೇರಿ ಬೂತ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಾತ್ರವಲ್ಲದೆ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಕೂಡಾ ತನ್ನನ್ನು ತೊಡಗಿಸಿಕೊಂಡಿದ್ದರು. ಮೃತರು ಕಾಣಿಯೂರು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬೆಳಂದೂರು ಶಕ್ತಿಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ದರ್ಖಾಸು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಉಪಾಧ್ಯಕ್ಷ ಮರಳೀಧರ ಪುಣ್ಚತ್ತಾರು, ಪುತ್ತೂರು ಪಿ.ಎಲ್‌ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಗೌಡ ಕಂಡಿಗ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಬಿಜೆಪಿ ಕಾಣಿಯೂರು ಶಕ್ತಿಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ ಮತ್ತಿತರರು ಭೇಟಿ ನೀಡಿದರು.

LEAVE A REPLY

Please enter your comment!
Please enter your name here