ನೆಲ್ಯಾಡಿ: ಪಡುಬೆಟ್ಟು ನಿವಾಸಿ ಇನಾಸ್ ಡಿ.ಸೋಜ ನಿಧನ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಪಡುಬೆಟ್ಟು ನಿವಾಸಿ ಇನಾಸ್ ಡಿ.ಸೋಜ(54ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 17ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

 


ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಇನಾಸ್ ಡಿ.ಸೋಜರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೇ ೧೭ರಂದು ರಾತ್ರಿ ನಿಧನರಾಗಿದ್ದಾರೆ. ಮೃತ ಇನಾಸ್‌ರವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ದುಲ್ಸಿನಾ ಡಿ.ಸೋಜ, ಪುತ್ರ ಶೈಲೇಸ್ ಡಿ.ಸೋಜ, ಪುತ್ರಿ ಶಿಲ್ಪಾ ಡಿ.ಸೋಜರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here