ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಿಬ್ಬಂದಿಗಳ ಸಭೆ

0

  • ಪರೋಕಾರ ಮನೋಭಾವದ ಜೊತೆ ಮಾನವೀಯ ಮೌಲ್ಯ ಬೆಳೆಸಿಕೊಂಡಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಒಡಿಯೂರು ಶ್ರೀ

ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಪ್ರಾಂಗಣದಲ್ಲಿ ಜರಗಿದ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಿಬ್ಬಂದಿಗಳ ಸಭೆ – ಸಂಸ್ಕೃತಿ ಸಂಸ್ಕಾರ ಕಾರ್ಯಕ್ರಮವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಿದರು.

 

 


ಬಳಿಕ ಆಶೀರ್‍ವಚನ ನೀಡಿದ ಅವರು ಆತ್ಮವಿಶ್ವಾಸ ವೃದ್ಧಿಸಿಕೊಂಡು ಗ್ರಾಮದ ಜನರ ಭೇಟಿ, ಗುಂಪುಗಳ ರಚನೆ ಎಲ್ಲವನ್ನೂ ಪ್ರೀತಿಯಿಂದ ಮಾಡಿದಾಗ ಯಶಸ್ಸು ಸಾದ್ಯವಾಗುತ್ತದೆ. ಶಿಸ್ತು – ಸಂಯಮ, ಪರೋಪಕಾರದ ಮನೋಭಾವದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದ ಸೇನಾನಿಗಳಾಗಬೇಕು. ಸಂಸ್ಕಾರದಿಂದ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಸಂಸ್ಕಾರಯುತ ಸಂಘಟನೆಯ ರೂವಾರಿಗಳಾಗಿ ನೀವೆಲ್ಲರೂ ಸಮಾಜದಲ್ಲಿ ಗುರುತಿಸಲ್ಪಡಬೇಕು. ನೀವು ಸೇವೆ ಮಾಡುವ ಸಂಸ್ಥೆಯ ಬೇರುಗಳನ್ನು ಗಟ್ಟಿಗೊಳಿಸುವ ಪ್ರಾಮಾಣಿಕ ಸೇವೆ ತಮ್ಮಿಂದಾಗಲಿ ಎಂದರು.

ಸಾಧ್ವಿ ಶ್ರೀ ಮಾತಾನಂದಮಯೀರವರು ದಿವ್ಯ ಸಾನಿಧ್ಯ ಕರುಣಿಸಿದ್ದದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ನಿರ್ದೇಶಕ ವೇಣುಗೋಪಾಲ ಮಾರ್ಲ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಉಡುಪಿ ವಲಯ ಅಧ್ಯಕ್ಷರಾದ ಕೆ. ಪ್ರಭಾಕರ ಶೆಟ್ಟಿ, ಯಶವಂತ್ ವಿಟ್ಲ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪಧ್ಮನಾಭ ಒಡಿಯೂರು ಮೊದಲಾದವರು ಉಪಸ್ಥಿತರಿದ್ದರು.

ಸಹಕಾರಿಯ ಅಧ್ಯಕ್ಷ ಎ. ಸುರೇಶ್ ರೈರವರು ಯೋಜನೆಯ ಮುಂದಿನ ಕಾರ್ಯವೈಖರಿಯ ಬಗ್ಗೆ ಮಾತನಾಡಿದರು. ಯೋಜನಾ ನಿರ್ದೇಶಕ ಕಿರಣ್ ಉರ್ವ ಯೊಜನೆಯ ಬಗ್ಗೆ ಮಾಹಿತಿ ನೀಡಿದರು. ವಿಸ್ತರಣಾಧಿಕಾರಿ ಯಶೋಧರ್ ಸಾಲ್ಯಾನ್ ಸ್ವಾಗತಿಸಿ, ಸಂಯೋಜಕಿ ಕಾವ್ಯಲಕ್ಷ್ಮಿ ವಂಧಿಸಿದರು. ಸಂಯೋಜಕಿ ಲೀಲಾ ಕಾರ್ಯಕ್ರಮ ನಿರೂಪಿಸಿದರು.ಸಾಮೂಹಿಕ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಧ್ಯಾನ-ಪ್ರಾಣಾಯಾಮ, ಶ್ರೀಮಧ್ಬಗವದ್ಗೀತೆ, ಶ್ರೀ ಹನುಮಾನ್ ಚಾಲೀಸ ಪಠಣ, ನಾಮ ಸಂಕೀರ್ತನೆ ಜರಗಿತು.

LEAVE A REPLY

Please enter your comment!
Please enter your name here