ಕುಕ್ಕಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಬಲಿವಾಡು ಸೇವೆ, ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

0

ಚಿತ್ರ: ಸುಧಾಕರ್ ಕಾಣಿಯೂರು

 


ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಬಲಿವಾಡು ಸೇವೆ ಮತ್ತು ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆಯು ಮೇ 21ರಂದು ನಡೆಯಿತು. ಜೂ 4 ರಿಂದ ಜೂ 6ರವರೆಗೆ ಕುಕ್ಕಟ್ಟೆ ಕ್ಷೇತ್ರದಲ್ಲಿ ಶ್ರೀ ದೇವರ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವವು ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಯಾಗಿ ನಡೆಸಲು ಮತ್ತು ಹೊರೆಕಾಣಿಕೆ ಸಮರ್ಪಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಕಾರ್ಯಾಧ್ಯಕ್ಷ ವಸಂತ ಗೌಡ ನಡುಬೈಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಮಧುಚಂದ್ರ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಬಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ, ಉಪಾಧ್ಯಕ್ಷರಾದ ಸರೋಜಿನಿ ಆಚಾರ್ಯ ಕಡಬ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕುಕ್ಕಟ್ಟೆ ಕ್ಷೇತ್ರದಲ್ಲಿ ಶ್ರೀ ದೇವರ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವವು ಜೂ 4ರಿಂದ ಜೂ6ರವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here