ಮೇ 24: ಬೆಟ್ಟಂಪಾಡಿ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ, ಸನ್ಮಾನ, ಯಕ್ಷಗಾನ ಕೂಟ – ಬಯಲಾಟ

0

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ, ಸನ್ಮಾನ ಮತ್ತು ಯಕ್ಷಗಾನ ತಾಳಮದ್ದಳೆ, ಬಯಲಾಟ ಪತ್ತನಾಜೆಯ ಶುಭದಿನದಂದು ಮೇ 24 ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ಮಂಗಳೂರು ಎಂಆರ್‌ಪಿ‌ಎಲ್ ನ ಸೀತಾರಾಮ ರೈ ಕೈಕಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಡಾ. ಪ್ರಭಾಕರ ಜೋಷಿಯವರ ಭೀಷ್ಮ ಪಾತ್ರದಲ್ಲಿ ‘ಭೀಷ್ಮ ಸೇನಾಧಿಪತ್ಯ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ವಾರ್ಷಿಕೋತ್ಸವ ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಎಂ. ಪ್ರಭಾಕರ ಜೋಷಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಉದ್ಯಮಿ ರಾಧಾಕೃಷ್ಣ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಹಿರಿಯ ಕಲಾವಿದರಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನುಳಿಯಾಲು ಸಂಜೀವ ರೈ ಮತ್ತು ಬೆಟ್ಟಂಪಾಡಿ ವೆಂಕಟ್ರಾವ್ ರವರಿಗೆ ಸನ್ಮಾನ ನಡೆಯಲಿದೆ. ಬೆಟ್ಟಂಪಾಡಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು ಉಪಸ್ಥಿತರಿರಲಿದ್ದಾರೆ.
ಅಪರಾಹ್ನ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ‘ನಾಗರ‌ ಪಂಚಮಿ’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here