ಕಾಣಿಯೂರು ಗ್ರಾ.ಪಂ.ಮಾಜಿ ಪಿಡಿಓ ಜಯಪ್ರಕಾಶ್ ನಂಗಾರು ನಿಧನ

0


ಕಾಣಿಯೂರು : ಕಾಣಿಯೂರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಬಳಿಕ ವರ್ಗಾವಣೆಯಾಗಿದ್ದ ಪ್ರಸ್ತುತ ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ನಂಗಾರು (44 ವ.) ಅವರು ಅಸೌಖ್ಯದಿಂದ ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದೊಂದು ತಿಂಗಳಿನಿಂದ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಚಿಕಿತ್ಸೆಗೆ ಸ್ಪಂದಿಸದೇ ಮೇ.22ರಂದು ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here