ಮೇ.27: ಎಸ್.ಡಿ.ಪಿ.ಐ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಜನಾಧಿಕಾರ ಸಮಾವೇಶ

0

  • ಪುತ್ತೂರಿನ ವಿವಿಧ ಕಡೆಗಳಲ್ಲಿ ಪೂರ್ವಭಾವಿ ಸಭೆ

 

ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೇ.27ರಂದು ಮಂಗಳೂರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವಿವಿಧ ಕಡೆಗಳಲ್ಲಿ ಪೂರ್ವಿಭಾವಿ ಸಭೆ ನಡೆಯಿತು.

 

ಕೂರ್ನಡ್ಕ, ಬನ್ನೂರು, ಪರ್ಲಡ್ಕ, ನೆ.ಮುಡ್ನೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ವಿಚಾರವಾಗಿ ಚರ್ಚಿಸಲಾಯಿತು. ಪಕ್ಷದ ಮುಖಂಡರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಜನಾಧಿಕಾರ ಸಮಾವೇಶದಲ್ಲಿ ಪುತ್ತೂರಿನಿಂದ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಸ್.ಡಿ.ಪಿ.ಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಹಾಗೂ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here