ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಸೀಯಾಳಾಭಿಷೇಕ

0

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವರ್ಷಂಪ್ರತಿ ಶ್ರೀ ದೇವರಿಗೆ ಸಮರ್ಪಣೆ ಮಾಡುವ ಸೀಯಾಳಾಭಿಷೇಕ ಮೇ. 23ರಂದು ನಡೆಯಿತು.


ಬೆಳಿಗ್ಗೆ ಸಂಕಲ್ಪದ ಬಳಿಕ ಸೀಯಾಳಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಸೀಯಾಳಾಭಿಷೇಕ ತೀರ್ಥವನ್ನು ಭಕ್ತರಿಗೆ ವಿತರಿಸುವಲ್ಲಿ ಸಮಿತಿ ಸದಸ್ಯರು ಸಹಕರಿಸಿದರು. ಮಹಾಪೂಜೆಯ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯ ರಾಮದಾಸ್ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here