ಮಹಾಲಿಂಗೇಶ್ವರ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಸಂಯೋಜನೆಗೊಂಡು, ರಾಜ್ಯ ಸರಕಾರದಿಂದ ವೇತನಾನುದಾನ ಪಡೆಯುತ್ತಿರುವ ಪುತ್ತೂರು ಕೊಂಬೆಟ್ಟಿನಲ್ಲಿರುವ ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ 2022-23ನೇ ಸಾಲಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳ ಅವಧಿಯ ತರಬೇತಿ ವಿಭಾಗಗಳಾದ ಡ್ರಾಫ್ಟ್ಸ್‌ಮನ್ ‘ಸಿವಿಲ್, ಇಲೆಕ್ಟ್ರೀಷಿಯನ್ ಮತ್ತು ಎಲೆಕ್ಟ್ರಾನಿಕ್ಸ್ ಮೆಕಾನಿಕ್’ ವೃತ್ತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು. ಪ್ರವೇಶವು ಸರಕಾರದ ಮೀಸಲಾತಿ ನಿಯಮದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಮುಕ್ತವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್,emprg.kan.nic.iಅಥವಾ ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ ಅನ್‌ಲೈನ್ ಮುಖಾಂತರ ಜೂನ್ 20 ರ ತನಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ಮಹಾಲಿಂಗೇಶ್ವರ ಐಟಿಐಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಸಂಚಾಲಕ ಯು.ಪಿ.ರಾಮಕೃಷ್ಣ ಮತ್ತು ಪ್ರಾಂಶುಪಾಲ ಪ್ರಕಾಶ್ ಪೈ ಬಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here