ನೆಲ್ಯಾಡಿ: ಬಿಲ್ಲವ ಗ್ರಾಮ ಸಮಿತಿ ಮಹಾಸಭೆ

0

ನೆಲ್ಯಾಡಿ: ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಗ್ರಾಮ ಸಮಿತಿ ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 8ರಂದು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ನೋಣಯ್ಯ ಅಂಬರ್ಜೆ ಮತ್ತು ತಂಡದವರಿಂದ ಕುಣಿತ ಭಜನೆ ನಡೆಯಿತು. ಬಳಿಕ ಗುರುಪೂಜೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಸಿಆರ್‌ಇಡಿ ಬಂಟ್ವಾಳ ತಾಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಾರನಾಥ ಪೊಸೊಳಿಗೆ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ನಾನು ವಿದ್ಯಾರ್ಥಿಯಾಗಿದ್ದ ವೇಳೆ ಇದೇ ಸಂಘದಿಂದ ಹಾಗೂ ಇತರೇ ಸಂಘದಿಂದ ವಿದ್ಯಾರ್ಥಿ ವೇತನ ಪಡೆದುಕೊಂಡಿದ್ದೇನೆ. ಇವತ್ತು ಒಳ್ಳೆಯ ಉದ್ಯೋಗದಲ್ಲಿ ಇರಲು ಇಂತಹ ಸಂಘಟನೆಗಳೇ ಕಾರಣ. ಇಲ್ಲಿ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಶ್ರಮವಿಟ್ಟು ಓದಿ ಉನ್ನತ ಸ್ಥಾನಕ್ಕೆ ಹೋಗಬೇಕೆಂದು ಹೇಳಿದರು. ನೆಲ್ಯಾಡಿ ವಲಯ ಸಂಚಾಲಕರಾದ ಉಷಾ ಅಂಚನ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಹಾಗೂ ಸಿದ್ಧಾಂತದ ಬಗ್ಗೆ ತಿಳಿಸಿದರು. ಸಂಘದ ಅಧ್ಯಕ್ಷ ಡಾ.ಸದಾನಂದ ಕುಂದರ್‌ರವರು ಸ್ವಾಗತಿಸಿ, ಸಂಘದ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. ಕೋಶಾಧಿಕಾರಿ ಲೋಕೇಶ್ ಬಾಣಜಾಲು ಲೆಕ್ಕಪತ್ರ ಮಂಡಿಸಿದರು. ಲಿಖಿತ ಪುಸ್ತಕ ವಿತರಣೆಯ ಮಕ್ಕಳ ಹೆಸರು ವಾಚಿಸಿದರು. ಕಾರ್ಯದರ್ಶಿ ಮೋಹನ್ ಕುಮಾರ್ ಗತಸಭೆಯ ವರದಿ ವಾಚಿಸಿ, ಕೊನೆಯಲ್ಲಿ ವಂದಿಸಿದರು. ಸಂಘದ ಉಪಾಧ್ಯಕ್ಷ ವೀರಪ್ಪ ಅಂಬರ್ಜೆ, ಜೊತೆ ಕಾರ್ಯದರ್ಶಿ ಮಹೇಶ್ ಬಿ., ಸುಧೀಶ್, ಪುರಂದರ ಅಂಬರ್ಜೆ, ರಕ್ಷನ್ ಸಹಕರಿಸಿದರು. ಜನಾರ್ದನ ಬಾಣಜಾಲು, ಜನಾರ್ದನ ಪೊಸೊಳಿಗೆ, ಚಂದ್ರಶೇಖರ ಬಾಣಜಾಲು, ಸುಂದರ ಬಾಣಜಾಲು, ಶೀಲಾವತಿ ದೋಂತಿಲ, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾಶ್ರೀ ತುಳಸೀದರನ್ ಸಭೆಯಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಯಿತು.

LEAVE A REPLY

Please enter your comment!
Please enter your name here