ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಸಭೆ

0

ಪುತ್ತೂರು: ಕೇಂದ್ರ ಸರ್ಕಾರದ 8 ವರ್ಷಗಳ ಆಡಳಿತದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಮುಂದಿನ ದಿನ ಸೇವೆ, ಸುಶಾಸನ , ಬಡವರ ಕಲ್ಯಾಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ವಿಚಾರವಾಗಿ ವಿಶೇಷ ಸಭೆ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮೇ 23ರಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್ .ಸಿ ನಾರಾಯಣ್ ಸರಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಬಿಜೆಪಿ ಮಂಡಲದ ಪ್ರಭಾವಿಯಾಗಿರುವ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ರವರು ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ ಮತ್ತು ಮೋನಪ್ಪ ದೇವಸ್ಯ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ , ಹಾಗೂ ಅನನ್ಯ ಜವಾಬ್ದಾರಿ ಇರುವ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಗ್ರಾಮಂತರ ಮಂಡಲದ ಪ್ರಧಾನಕಾಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ವಂದಿಸಿದರು .

LEAVE A REPLY

Please enter your comment!
Please enter your name here