ಎಸ್‌ಎಸ್‌ಎಲ್‌ಸಿ: ಕುಂತೂರು ಮಾರ್ ಇವಾನಿಯೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.95 ಫಲಿತಾಂಶ

0

ನೆಲ್ಯಾಡಿ: 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂತೂರು ವಿದ್ಯಾನಗರ ಮಾರ್ ಇವಾನಿಯೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 95.28 ತೇರ್ಗಡೆ ಫಲಿತಾಂಶ ಲಭಿಸಿದೆ.

ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ. 95.28 ತೇರ್ಗಡೆ ಫಲಿತಾಂಶ ಲಭಿಸಿದೆ. 7 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಜಯಶ್ರೀ ಎಂ. 615, ಅಲಿನಾ ಸೂಸನ್ ಮೋನ್ಸಿ 604, ಹರ್ಷಿಣಿ ಎಸ್.ವಿ. 584, ಮನ್ವಿತ್ 572, ಮನಿಷಾ 559, ಮೇಘಾ ಸಾಜನ್ 557, ಯಸ್ಮಿತಾ 550 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here